Photos: ಬಸವರಾಜ ಬೊಮ್ಮಾಯಿ ಆದ ನಾನು..! ಹೇಗಿತ್ತು ನೂತನ ಸಿಎಂ ಪ್ರಮಾಣ ವಚನ ಕಾರ್ಯಕ್ರಮ..?

Vijaya Karnataka Web 28 Jul 2021, 12:28 pm
  • ರಾಜ್ಯದ 30ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪದಗ್ರಹಣ

    ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾ ಕೊನೆಯಾಗಿದೆ. ನಿರ್ಗಮಿತ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಉತ್ತರಾಧಿಕಾರಿಯಾಗಿ ಶಿಗ್ಗಾಂವಿ ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದು, ಬುಧವಾರ ಗಾಜಿನ ಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಿಎಂ ಆಗಿ ಪದಗ್ರಹಣ ಮಾಡಿದರು. ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಪ್ರತಿಜ್ಞಾವಿಧಿ ಬೋಧಿಸಿದರು. ರಾಜಭವನದಲ್ಲಿ ನಡೆದ ಕಾರ್ಯಕ್ರಮಕ್ಕೆ ಬಿಜೆಪಿಯ ಪ್ರಮುಖ ನಾಯಕರಾದ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಗೋವಿಂದ ಕಾರಜೋಳ ಸೇರಿ ಹಲವು ನಾಯಕರು ಸಾಕ್ಷಿಯಾದರು. ನೂತನ ಸಿಎಂ ಆಗಿ ಕರುನಾಡ ಚುಕ್ಕಾಣಿ ಹಿಡಿದ ಬಸವರಾಜ ಬೊಮ್ಮಾಯಿ ಅವರ ಪ್ರಮಾಣ ವಚನ ಕಾರ್ಯಕ್ರಮ ಹೇಗಿತ್ತು ಎಂಬುದನ್ನು ಫೋಟೋಗಳಲ್ಲಿ ನೋಡಿ..!

  • ಪದಗ್ರಹಣ ಕಾರ್ಯಕ್ರಮಕ್ಕೂ ಮುಂಚೆ ಸಿಎಂ-ಗವರ್ನರ್‌..!

  • ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಅಭಿನಂದನೆ ಸಲ್ಲಿಸಿದ ರಾಜ್ಯಪಾಲರು.

  • ನೂತನ ಸಿಎಂಗೆ ನಿರ್ಗಮಿತ ಮುಖ್ಯಮಂತ್ರಿ ಬಿಎಸ್‌ವೈ ಅಭಿನಂದನೆ.

  • ಇನ್ನಷ್ಟು ಚಿತ್ರಗಳುಡೌನ್‌ಲೋಡ್‌ ಆ್ಯಪ್‌
  • ಪ್ರಮಾಣ ವಚನ ಸ್ವೀಕರಿಸುತ್ತಿರುವ ಬಸವರಾಜ ಬೊಮ್ಮಾಯಿ.

  • ಬಸವರಾಜ ಬೊಮ್ಮಾಯಿ ಆದ ನಾನು..!.

  • ರಾಜ್ಯಪಾಲ ಗೆಹ್ಲೋಟ್‌ರಿಂದ ಪ್ರತಿಜ್ಞಾ ವಿಧಿ ಬೋಧನೆ.

  • ಪ್ರಮಾಣ ವಚನ ಬಳಿಕ ಕಡತಗಳಿಗೆ ಬಸವರಾಜ ಬೊಮ್ಮಾಯಿ ಸಹಿ.

  • ಜನ ಗಣ ಮನ ಅಧಿನಾಯಕ ಜಯಹೇ..!.

  • ನೂತನ ಸಿಎಂಗೆ ಗೋವಿಂದ ಕಾರಜೋಳ ಅಭಿನಂದನೆ.